ADVERTISEMENT

ಲೆಫ್ಟಿನೆಂಟ್‌ ಗವರ್ನರ್‌ ಕಚೇರಿ ಬಳಿ ಕೇಜ್ರಿವಾಲ್‌ ನೇತೃತ್ವದಲ್ಲಿ ಧರಣಿ

ಪಿಟಿಐ
Published 14 ಮೇ 2018, 19:30 IST
Last Updated 14 ಮೇ 2018, 19:30 IST
ಲೆಫ್ಟಿನೆಂಟ್‌ ಗವರ್ನರ್‌ ಕಚೇರಿ ಬಳಿ  ಕೇಜ್ರಿವಾಲ್‌ ನೇತೃತ್ವದಲ್ಲಿ ಧರಣಿ
ಲೆಫ್ಟಿನೆಂಟ್‌ ಗವರ್ನರ್‌ ಕಚೇರಿ ಬಳಿ ಕೇಜ್ರಿವಾಲ್‌ ನೇತೃತ್ವದಲ್ಲಿ ಧರಣಿ   

ನವದೆಹಲಿ: ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ಸಿಸಿಟಿವಿ ಅಳವಡಿಕೆಗೆ ಸಂಬಂಧಿಸಿದಂತೆ ಲೆಫ್ಟಿನೆಂಟ್‌ ಗವರ್ನರ್‌ ಹಾಗೂ ದೆಹಲಿ ಸರ್ಕಾರದ ನಡುವೆ ಮತ್ತೆ ಮುಸುಕಿನ ಗುದ್ದಾಟ ಆರಂಭವಾಗಿದೆ. ಬಿಜೆಪಿ ಒತ್ತಡಕ್ಕೆ ಮಣಿದು, ಯೋಜನೆಗೆ ಅಡ್ಡಿಪಡಿಸದಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌, ಸಂಪುಟ ಸದಸ್ಯರು, ಶಾಸಕರು ಸಾಮೂಹಿಕವಾಗಿ ಲೆ.ಗವರ್ವರ್‌ ಅನಿಲ್‌ ಬೈಜಾಲ್‌ ಮನೆ ಮುಂದೆ ಧರಣಿ ನಡೆಸಿದರು.

‘ಮುಖ್ಯಮಂತ್ರಿ ಮತ್ತು ಶಾಸಕರು ಬೈಜಾಲ್‌ ಅವರನ್ನು ಭೇಟಿಯಾಗಲು ನಿರ್ಧರಿಸಿದ್ದರು. ಆದರೆ ಅದಕ್ಕೆ ಅವಕಾಶ ಸಿಕ್ಕಿರಲಿಲ್ಲ. ಅಲ್ಲದೇ ಕಚೇರಿ ಮುಂದೆ ಪೊಲೀಸರನ್ನು ನಿಯೋಜಿಸಲಾಗಿತ್ತು. ಇದರಿಂದ ಕಚೇರಿಯಿಂದ 100 ಮೀಟರ್‌ ದೂರದಲ್ಲಿ ಅವರು ಧರಣಿ ನಡೆಸಿದರು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT