ADVERTISEMENT

ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2018, 19:30 IST
Last Updated 6 ಏಪ್ರಿಲ್ 2018, 19:30 IST

ಮುಂಬೈ: ಚಲಿಸುತ್ತಿದ್ದ ಲೋಕಲ್‌ ರೈಲಿನಲ್ಲಿ ಮಹಿಳೆ ಮೇಲೆ ಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯವೆಸಗಿದ್ದು,  ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ. ಸಹ ಪ್ರಯಾಣಿಕರು ನೀಡಿದ ದೂರಿನ ಅನ್ವಯ ಆರೋಪಿಯನ್ನು ಬಂಧಿಸಲಾಗಿದೆ.

ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಲ್‌ನಿಂದ ಕಲ್ಯಾಣ್‌ಗೆ ಹೊರಟಿದ್ದ ರೈಲಿನಲ್ಲಿ ಈ ಘಟನೆ ನಡೆದಿದೆ.

ಅಂಗವಿಕಲರು ಹಾಗೂ ಕ್ಯಾನ್ಸರ್‌ ಪೀಡಿತರಿಗೆ ಮೀಸಲಾದ ಬೋಗಿಯಲ್ಲಿದ್ದ ಆರೋಪಿ ರಫೀಕ್‌ ಚಿಂಕನ್‌ ಅಲಿಖಾನ್‌ (35), ಪರಿಚಿತ ಮಹಿಳೆ ಜೊತೆ ಜಗಳ ಮಾಡಿದ್ದಾನೆ. ಬಳಿಕ ಆಕೆಯನ್ನು ರೈಲಿನಿಂದ ಹೊರದಬ್ಬಲು ಮುಂದಾಗಿದ್ದಾನೆ. ಆದರೆ ಮಹಿಳೆಯು ಆತನ ಹಿಡಿತದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ದಾದರ್‌ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಲಾಯಿತು.

ADVERTISEMENT

ಇದೇ ಬೋಗಿಯಲ್ಲಿದ್ದ ಅಂಗವಿಕಲ ಪ್ರಯಾಣಿಕರೊಬ್ಬರು ಈ ಘಟನೆಯನ್ನು ವಿಡಿಯೊ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅದು ವೈರಲ್‌ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.