ನವದೆಹಲಿ (ಐಎಎನ್ಎಸ್): ಬಹುನಿರೀಕ್ಷಿತ ಲೋಕಪಾಲ ಮಸೂದೆಗೆ ಸಮಾಜವಾದಿ ಪಕ್ಷವು ವಿರೋಧ ವ್ಯಕ್ತಪಡಿಸಿದೆ. ಮಸೂದೆ ಸಾರ್ವಜನಿಕ ಹಿತಾಸಕ್ತಿಯಿಂದ ಕೂಡಿಲ್ಲ ಎಂದು ಆಕ್ಷೇಪಿಸಿ ಸಮಾಜವಾದಿ ಪಕ್ಷದ ಸದಸ್ಯರು ರಾಜ್ಯಸಭೆಯಿಂದ ಹೊರನಡೆದ ಘಟನೆ ಮಂಗಳವಾರ ನಡೆದಿದೆ.
ಈ ಮಸೂದೆ ಹೇಳುವಂತೆ ಯಾವುದೇ ವ್ಯಕ್ತಿ ದೂರು ಸಲ್ಲಿಸಬಹುದು ಮತ್ತು ನಾವು ಆ ಕುರಿತು ಹೇಳಿಕೆ ನೀಡಲು ವಿಚಾರಣೆ ನಡೆಸುವ ಪೊಲೀಸ್ ಅಧಿಕಾರಿಗಳ ಬಳಿಗೆ ಹೋಗಬೇಕಾಗುತ್ತದೆ. ಇದರಿಂದ ದೇಶದಲ್ಲಿ ಸಂದಿಗ್ಧ ವಾತಾವರಣ ನಿರ್ಮಾಣವಾಗಲಿದ್ದು, ಅಧಿಕಾರಿಗಳು ಯಾವುದೇ ಕೆಲಸ ಮಾಡಲು ಹಿಂಜರಿಯುವಂತಾಗುತ್ತದೆ ಎಂದು ಎಸ್‌ಪಿ ಮುಖಂಡ ರಾಮಗೋಪಾಲ್ ಯಾದವ್ ಅವರು ಮಸೂದೆ ಕುರಿತು ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.