ADVERTISEMENT

ಲೋಕಪಾಲ್ ಮಸೂದೆ ಜಾರಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2011, 19:30 IST
Last Updated 23 ಮಾರ್ಚ್ 2011, 19:30 IST

ನಾಸಿಕ್ (ಪಿಟಿಐ): ಭ್ರಷ್ಟಾಚಾರ ತಡೆಗೆ ಲೋಕಪಾಲ್ ಮಸೂದೆ ಜಾರಿಗೆ ತರಬೇಕೆಂದು ಒತ್ತಾಯಿಸಲು ಸಾಮಾಜಿಕ ಕಾರ್ಯಕರ್ತರಾದ ಅಣ್ಣಾ ಹಜಾರೆ ಅವರು ಏಪ್ರಿಲ್ 5 ರಂದು ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ಕೂಡುವುದಾಗಿ ತಿಳಿಸಿದ್ದಾರೆ.

ಮಂಗಳವಾರ  ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಹಜಾರೆ  ಹೆಚ್ಚುತ್ತಿರುವ ಭ್ರಷ್ಟಾಚಾರ ಮತ್ತು ಹಿಂಸಾಚಾರದ ವಿರುದ್ಧ ಪ್ರತಿಭಟಿಸಲು ಏಪ್ರಿಲ್ 12 ರಂದು ‘ಜೈಲ್ ಭರೋ’ ಮುಷ್ಕರದಲ್ಲಿ ಭಾಗವಹಿಸುವಂತೆ ಜನರಿಗೆ ಕರೆ ನೀಡಿದರು.

ಭ್ರಷ್ಟಾಚಾರವನ್ನು ಮಹಾತ್ಮಾ ಗಾಂಧಿ ಅವರ ಚಿಂತನೆಯಂತೆ ಕಿತ್ತುಹಾಕಲು ಸಾಧ್ಯವಾಗುವುದಿಲ್ಲ. ಆದ್ದರಿಂದ  ಮರಾಠಾ ದೊರೆ ಶಿವಾಜಿಯ ಹಾದಿ ಅನುಸರಿಸಬೇಕು ಎಂದರು. ತಮ್ಮ ಏಪ್ರಿಲ್ 5ರ ಉಪವಾಸ ‘ಸ್ವಾತಂತ್ರ್ಯದ ಎರಡನೇ ಸಮರ’ ಎಂದು ಬಣ್ಣಿಸಿದ ಅವರು ಯುವಕರು ಮುಂದೆ ಬರಬೇಕೆಂದು ಕರೆ ಇತ್ತರು.ಜನರು ಗ್ರಾಮ ಪಂಚಾಯಿತಿ, ಜಿಲ್ಲಾಧಿಕಾರಿ  ಕಚೇರಿಗಳ ಮುಂದೆ ಉಪವಾಸ ಸತ್ಯಾಗ್ರಹ ನಡೆಸಿ ಲೋಕಪಾಲ್ ಮಸೂದೆ ಜಾರಿಗೆ ಒತ್ತಾಯಿಸಿ ಮನವಿ ಸಲ್ಲಿಸಬೇಕು ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.