ADVERTISEMENT

ಲೋಕೂರ್ ಪ್ರಮಾಣ ವಚನ

​ಪ್ರಜಾವಾಣಿ ವಾರ್ತೆ
Published 4 ಜೂನ್ 2012, 19:30 IST
Last Updated 4 ಜೂನ್ 2012, 19:30 IST

ನವದೆಹಲಿ (ಐಎಎನ್‌ಎಸ್): ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಯಾಗಿ ಮದನ್ ಬಿ. ಲೋಕೂರ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಮೂಲತಃ ಬೆಳಗಾವಿಯರಾದ ಲೋಕೂರ್ ಅವರು ಈ ಮೊದಲು, ಆಂಧ್ರ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿಯಾಗಿದ್ದರು. ನ್ಯಾ. ಲೋಕೂರ್ ಅವರಿಗೆ ನೀಡಿರುವ ಬಡ್ತಿಯೊಂದಿಗೆ ಸುಪ್ರೀಂಕೋರ್ಟ್‌ನ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆ 26ಕ್ಕೆ ಏರಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದ ನ್ಯಾಯಮೂರ್ತಿಯೊಬ್ಬರು ಬೇಸಿಗೆ ರಜಾ ಕಾಲದ ಅವಧಿಯಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ಇದೇ ಮೊದಲು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.