ನವದೆಹಲಿ, (ಪಿಟಿಐ): ಲೋಕ್‌ಪಾಲ್ ಮಸೂದೆ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸುವಂತೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರಿಗೆ ಪ್ರಧಾನಿ ಮನ್‌ಮೋಹನ ಸಿಂಗ್ ಅವರು ಆಹ್ವಾನ ನೀಡಿದ್ದಾರೆ.
ಹಜಾರೆ ಅವರಿಗೆ ನೀಡಿರುವ ಆಹ್ವಾನವನ್ನು ಪ್ರಧಾನಿ ಕಚೇರಿಯ ಮೂಲಗಳು ದೃಢಪಡಿಸಿವೆ. ಅವರು ತಮಗೆ ಅನುಕೂಲವಾದ ಸಮಯದಲ್ಲಿ ಪ್ರಧಾನಿಯನ್ನು ಭೇಟಿಯಾಗಬಹುದು. ಮಸೂದೆ ಕುರಿತಂತೆ ಹಜಾರೆ ಅಭಿಪ್ರಾಯಗಳನ್ನು ಪ್ರಧಾನಿ ಪಡೆಯಲಿದ್ದಾರೆ ಎಂದು ಮೂಲಗಳು ಹೇಳಿವೆ.
ಭ್ರಷ್ಟಾಚಾರವನ್ನು ನಿಗ್ರಹಿಸಲು ಕಠಿಣ ಕಾಯಿದೆ ರೂಪಿಸುವ ನಿಟ್ಟಿನಲ್ಲಿ ಮಾರ್ಚ್ ಅಂತ್ಯದೊಳಗೆ ಲೋಕ್‌ಪಾಲ್ ಮಸೂದೆ ಕುರಿತಂತೆ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳದಿದ್ದರೆ ಏಪ್ರಿಲ್ 5ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹಜಾರೆ ಬುಧವಾರ ಎಚ್ಚರಿಕೆ ನೀಡಿದ್ದರು. ದೇಶದ ಪ್ರಜೆಗಳ ಪ್ರತಿನಿಧಿಗಳ ಅಭಿಪ್ರಾಯ ಪಡೆಯದೆ ಭ್ರಷ್ಟಾಚಾರ ನಿಗ್ರಹ ಮಸೂದೆ ಮಂಡಿಸಲು ಮುಂದಾದ ಸರ್ಕಾರದ ಕ್ರಮದ ಕುರಿತು ಅವರು ಆಶ್ಚರ್ಯ ವ್ಯಕ್ತಪಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.