ADVERTISEMENT

ವಂದನಾ ನಿರ್ಣಯ: ಸೋಮವಾರ ಪ್ರಧಾನಿ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2012, 19:30 IST
Last Updated 15 ಮಾರ್ಚ್ 2012, 19:30 IST

ನವದೆಹಲಿ(ಪಿಟಿಐ): ಸಂಸತ್ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಸಂಬಂಧಿಸಿದಂತೆ ಪ್ರಧಾನಿ ಸಿಂಗ್ ಲೋಕಸಭೆಯಲ್ಲಿ ಸೋಮವಾರ ಉತ್ತರಿಸಲಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಸಿಂಗ್ ಅವರು ಗುರುವಾರ ಪ್ರತಿಕ್ರಿಯೆ ನೀಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಅವರು ಸೋಮವಾರ ಪ್ರತಿಕ್ರಿಯಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT