ನವದೆಹಲಿ (ಪಿಟಿಐ): ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ವೈದ್ಯಕೀಯ ಚಿಕಿತ್ಸಾ ವೆಚ್ಚಗಳ ಬಗ್ಗೆ ಮಾಹಿತಿ ನೀಡುವಂತೆ ಕೇಂದ್ರ ಮಾಹಿತಿ ಆಯೋಗ (ಸಿಐಸಿ)ಆರೋಗ್ಯ ಇಲಾಖೆಗೆ ಭಾನುವಾರ ಸೂಚಿಸಿದೆ.
ಆರ್‌ಟಿಐ ಅರ್ಜಿದಾರರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಮಾಹಿತಿ ಆಯೋಗದ ಅಧ್ಯಕ್ಷ ಸತ್ಯಾನಂದ ಮಿಶ್ರಾ ಅವರು ಇನ್ನು 15 ದಿನಗಳಲ್ಲಿ ವಾಜಪೇಯಿ ಅವರ ವೈದ್ಯಕೀಯ ಖರ್ಚು ವೆಚ್ಚಗಳ ಸಂಪೂರ್ಣ ಮಾಹಿತಿ ನೀಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದರು.
ಅರ್ಜಿದಾರರು ಹಲವು ಭಾರಿ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದರೂ ಇಲಾಖೆ ಯಾವುದೇ ಮಾಹಿತಿ ನೀಡಿರಲಿಲ್ಲ. ಇದರಿಂದ ಬೇಸತ್ತು ಅರ್ಜಿದಾರರು ಕೇಂದ್ರ ಮಾಹಿತಿ ಆಯೋಗಕ್ಕೆ ದೂರು ಅರ್ಜಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.