ADVERTISEMENT

ವಾಯುಭಾರ ಕುಸಿತ: ತಮಿಳುನಾಡಿನಲ್ಲಿ ಮಳೆ, ನಾಳೆ ರಾಜ್ಯದಲ್ಲೂ ಮಳೆ ಸಾಧ್ಯತೆ

ಪಿಟಿಐ
Published 14 ಮಾರ್ಚ್ 2018, 15:58 IST
Last Updated 14 ಮಾರ್ಚ್ 2018, 15:58 IST
ವಾಯುಭಾರ ಕುಸಿತ: ತಮಿಳುನಾಡಿನಲ್ಲಿ ಮಳೆ, ನಾಳೆ ರಾಜ್ಯದಲ್ಲೂ ಮಳೆ ಸಾಧ್ಯತೆ
ವಾಯುಭಾರ ಕುಸಿತ: ತಮಿಳುನಾಡಿನಲ್ಲಿ ಮಳೆ, ನಾಳೆ ರಾಜ್ಯದಲ್ಲೂ ಮಳೆ ಸಾಧ್ಯತೆ   

ಮಧುರೈ: ಆಗ್ನೇಯ ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದಿಂದಾಗಿ ಕನ್ಯಾಕುಮಾರಿ ಸೇರಿದಂತೆ ತಮಿಳುನಾಡಿನ ಮೂರು ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆ ಸುರಿದಿದ್ದು ನಾಳೆ ರಾಜ್ಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಲವು ರಸ್ತೆಗಳು ಜಲಾವೃತಗೊಂಡಿದ್ದು, ಮನೆಗಳಿಗೆ, ಅಂಗಡಿಗಳಿಗೆ ನೀರು ನುಗ್ಗಿದೆ. ವಾಹನ ಸಂಚಾರರು ಪರದಾಡುವಂತಾಗಿದೆ. ಹೊಲ–ಗದ್ದೆಗಳಲ್ಲೂ ನೀರು ತುಂಬಿದ್ದು ಬೆಳೆಗಳಿಗೆ ಭಾರಿ ಹಾನಿಯಾಗಿದೆ. ತಿರುನಲ್ವೇಲಿ ಜಿಲ್ಲೆಯಲ್ಲಿರುವ ಪ್ರಸಿದ್ಧ ಜಲಪಾತದ ಸಮೀಪ ಹೋಗದಂತೆ ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗಿದೆ.

ಇನ್ನು ಎರಡು ದಿನಗಳವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ADVERTISEMENT

ಕರ್ನಾಟಕದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.