ADVERTISEMENT

ವಾರಾಣಸಿಯಲ್ಲಿ ಮೇಲ್ಸೇತುವೆ ಕುಸಿತ: ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

ಶವ ಹಸ್ತಾಂತರಿಸಲು ಲಂಚ ಪಡೆದವನ ವಿರುದ್ಧ ಕ್ರಮ

ಪಿಟಿಐ
Published 16 ಮೇ 2018, 19:30 IST
Last Updated 16 ಮೇ 2018, 19:30 IST

ಲಖನೌ : ವಾರಾಣಸಿಯ ರೈಲ್ವೆ ನಿಲ್ದಾಣ ಬಳಿ ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆ ಕುಸಿತಕ್ಕೆ ಸಂಬಂಧಿಸಿ, ಉತ್ತರಪ್ರದೇಶ ಸೇತುವೆ ನಿಗಮದ ಅಧಿಕಾರಿಗಳ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಸಿದ್ದಾರೆ. ಸರ್ಕಾರಿ ಸ್ವಾಮ್ಯದ ಈ ಸಂಸ್ಥೆಯ ಕಾಮಗಾರಿ ಗುಣಮಟ್ಟದ ಬಗ್ಗೆ ಈ ಹಿಂದೆಯೂ ದೂರುಗಳು ಕೇಳಿಬಂದಿದ್ದವು.

ನಿಗಮದ ಮುಖ್ಯ ಯೋಜನಾಧಿಕಾರಿ ಸೇರಿದಂತೆ ನಾಲ್ವರು ಅಧಿಕಾರಿಗಳನ್ನು ಸರ್ಕಾರ ಅಮಾನತುಗೊಳಿಸಿದೆ. ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಗಳವಾರ ನಡೆದ ಘಟನೆಯಲ್ಲಿ 18 ಮಂದಿ ಮೃತಪಟ್ಟಿದ್ದರು.

ಲಂಚದ ಬೇಡಿಕೆ– ಅಮಾನತು: ಮೇಲ್ಸೇತುವೆ ಕುಸಿತದಿಂದ ಮೃತಪಟ್ಟವರ ಶವ ಪಡೆಯಲು ಅವರ ಕುಟುಂಬದವರಿಂದ ಲಂಚಕ್ಕೆ ಬೇಡಿಕೆಯಿಡುತ್ತಿದ್ದ ಆಸ್ಪತ್ರೆ ನೌಕರನೊಬ್ಬನನ್ನು ಜಿಲ್ಲಾಧಿಕಾರಿ ಅಮಾನತು ಮಾಡಿದ್ದಾರೆ. ಆತನ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ADVERTISEMENT

ಬನಾರಸ್ ಹಿಂದೂ ವಿಶ್ವವಿದ್ಯಾಲಯ (ಬಿಎಚ್‌ಯು) ಮರಣೋತ್ತರ ಪರೀಕ್ಷಾ ಕೇಂದ್ರದಿಂದ ಶವ ಪಡೆಯಲು ಪ್ರತಿ ಶವದ ಮೇಲೆ ₹ 300 ಹಣಕ್ಕೆ ಬೇಡಿಕೆಯಿಡಲಾಗಿತ್ತು. ಹಣ ನೀಡದವರಿಗೆ ಮೃತದೇಹ ನೀಡಲು ನಿರಾಕರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.