ADVERTISEMENT

ವಿಚಾರಣೆ ಎದುರಿಸಲಿರುವ ಮಾಜಿ ಮುಖ್ಯಮಂತ್ರಿಗಳು

​ಪ್ರಜಾವಾಣಿ ವಾರ್ತೆ
Published 24 ಜೂನ್ 2012, 19:30 IST
Last Updated 24 ಜೂನ್ 2012, 19:30 IST

ಮುಂಬೈ: ಆದರ್ಶ ಹೌಸಿಂಗ್ ಸೊಸೈಟಿ ಹಗರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮೂವರು ಮಾಜಿ ಮುಖ್ಯಮಂತ್ರಿಗಳಾದ ಅಶೋಕ್ ಚವಾಣ್, ವಿಲಾಸ್‌ರಾವ್ ದೇಶಮುಖ್ ಮತ್ತು ಸುಶೀಲ್ ಕುಮಾರ್ ಶಿಂಧೆ ಅವರು  ದ್ವಿಸದಸ್ಯ ತನಿಖಾ ತಂಡದ ಎದುರು ಹಾಜರಾಗಲಿದ್ದಾರೆ.

ಬಾಂಬೈ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಜೆ. ಎ. ಪಾಟೀಲ್ ಮತ್ತು ಮಾಜಿ ಮುಖ್ಯ ಕಾರ್ಯದರ್ಶಿ  ಪಿ. ಸುಬ್ರಮಣಿಯನ್ ಅವರನ್ನು ಒಳಗೊಂಡ ತನಿಖಾ ಸಮಿತಿಯು  ಶಿಂಧೆ, ದೇಶಮುಖ್ ಮತ್ತು ಚವಾಣ್ ಅವರಿಗೆ ಈ ತಿಂಗಳ 25ರಿಂದ 27ರ ಒಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ವಿವಾದಾತ್ಮಕ ಬಹುಮಹಡಿ ಕಟ್ಟಡ ಇರುವ ಜಾಗವು ಕಾರ್ಗಿಲ್ ಯುದ್ಧದಲ್ಲಿ ಮಡಿದವರ ಕುಟುಂಬಗಳಿಗೆ ಮೀಸಲಿಟ್ಟ ಜಾಗವಲ್ಲ. ಬದಲಿಗೆ ಈ ಜಾಗವು ರಾಜ್ಯ ಸರ್ಕಾರಕ್ಕೆ ಸೇರಿದ್ದು ಎಂದು ಸಮಿತಿಯು ತನ್ನ ಮಧ್ಯಂತರ ವರದಿಯಲ್ಲಿ ತಿಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.