ಗಾಂಧಿನಗರ(ಪಿಟಿಐ): ಗುಜರಾತ್‌ನ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ವಿಜಯ್ ರೂಪಾಣಿ ಅವರು ಭಾನುವಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಗಾಂಧಿ ನಗರದ ಮಹಾತ್ಮ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಒ.ಪಿ. ಕೊಹ್ಲಿ ಅವರು ನೂತನ ಸಿಎಂಗೆ ಪ್ರಮಾಣ ವಚನ ಭೋದಿಸಿದರು.
ಉಪ ಮುಖ್ಯಮಂತ್ರಿಯಾಗಿ ನಿತಿನ್ ಪಟೇಲ್ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಹಿರಿಯ ನಾಯಕ ಎಲ್.ಕೆ. ಅಡ್ವಾಣಿ, ಹಣಕಾಸು ಸಚಿವ ಅರುಣ್ ಜೇಟ್ಲಿ ಸೇರಿದಂತೆ ಇತರ ಮುಖಂಡರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಶುಭ ಕೋರಿದ ಪ್ರಧಾನಿ: ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಕೋರಿ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.