
ಪ್ರಜಾವಾಣಿ ವಾರ್ತೆನವದೆಹಲಿ(ಪಿಟಿಐ): ಅಪರಿಚಿತ ವ್ಯಕ್ತಿಯಿಂದ ಹತ್ಯೆಯಾದ ದೆಹಲಿ ವಿವಿ ದ್ವಿತೀಯ ಪದವಿ ವಿದ್ಯಾರ್ಥಿನಿ ರಾಧಿಕಾ ತನ್ವರ್ ಅವರ ನಿವಾಸಕ್ಕೆ ತೆರಳಿದ ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ಪೋಷಕರಿಗೆ ಸಾಂತ್ವನ ಹೇಳಿ, ನ್ಯಾಯ ದೊರಕಿಸಿಕೊಡುವುದಾಗಿ ಭರವಸೆ ನೀಡಿದರು.
ಹತ್ಯೆಯನ್ನು ಖಂಡಿಸಿ ಬುಧವಾರ ದೆಹಲಿ ವಿಶ್ವವಿದ್ಯಾಲಯದ ದಕ್ಷಿಣ ಭಾಗದ ಅವರಣದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.ಆತ್ಮಾರಾಮ್ ಸನಾತನ ಧರ್ಮ ಕಾಲೇಜಿನ ಬಳಿ ಸೇರಿದ್ದ ವಿದ್ಯಾರ್ಥಿಗಳು ದೆಹಲಿ ಮುಖ್ಯಮಂತ್ರಿ ಮತ್ತು ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ, ವಿಶ್ವವಿದ್ಯಾಲಯ ಅವರಣಗಳಿಗೆ ಭದ್ರತೆ ಒದಗಿಸುವಂತೆ ಆಗ್ರಹಿಸಿದರು.
ಈ ನಡುವೆ ದೆಹಲಿ ಪೊಲೀಸರು ಶಂಕಿತ ಹಂತಕನ ರೇಖಾಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.