
ಪ್ರಜಾವಾಣಿ ವಾರ್ತೆನವದೆಹಲಿ(ಪಿಟಿಐ): ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮದಲ್ಲಿ ದಕ್ಷಿಣ ದೆಹಲಿಯಲ್ಲಿ ಮಂಗಳವಾರ ಬೆಳಿಗ್ಗೆ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅಪರಿಚಿತ ವ್ಯಕ್ತಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಮೃತಪಟ್ಟಿರುವ ವಿದ್ಯಾರ್ಥಿನಿಯನ್ನು ದ್ವಿತೀಯ ಪದವಿ ತರಗತಿಯ ರಾಧಿಕಾ ತನ್ವರ್ (20) ಎಂದು ಗುರುತಿಸಲಾಗಿದೆ. ರಾಮಲಾಲ್ ಆನಂದ್ ಕಾಲೇಜಿನ ಸಮೀಪದ ಬೆಳಿಗ್ಗೆ 10.20ರ ಸುಮಾರಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಗುಂಡು ಹಾರಿಸಿದರು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡ ರಾಧಿಕಾ ಅವರನ್ನು ರಾಮ ಮನೋಹರ ಲೋಹಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ಹೇಳಿದ್ದಾರೆ.ಪ್ರೀತಿಯಿಂದ ವಂಚಿತ ವ್ಯಕ್ತಿ ಈ ಕೃತ್ಯ ನಡೆಸಿರಬಹುದು ಎಂದು ತನಿಖೆ ನಡೆಸುತ್ತಿರುವ ಪೊಲೀಸರು ಶಂಕಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.