ADVERTISEMENT

ವಿನಾಯಿತಿ ಕೋರಿದ ನ್ಯಾ.ಯಾದವ್: ಸಿಬಿಐ ವಿರೋಧ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2011, 19:30 IST
Last Updated 22 ಅಕ್ಟೋಬರ್ 2011, 19:30 IST

ಚಂಡೀಗಡ (ಪಿಟಿಐ): `ನ್ಯಾಯಮೂರ್ತಿ ಮನೆ ಬಾಗಿಲಿಗೆ ಲಂಚ~ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಯಿಂದ ಶಾಶ್ವತವಾಗಿ ವೈಯಕ್ತಿಕ ವಿನಾಯಿತಿ ನೀಡಬೇಕು ಎಂದು ಕೋರಿ ಪಂಜಾಬ್-ಹರಿಯಾಣ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ನಿರ್ಮಲ್ ಯಾದವ್ ಮಾಡಿರುವ ಮನವಿಯನ್ನು ಸಿಬಿಐ ತೀವ್ರವಾಗಿ ವಿರೋಧಿಸಿದೆ.

ಯಾದವ್ ಅವರನ್ನು ಇತರ ಆರೋಪಿಗಳಿಗಿಂತ ಎತ್ತರದ ಸ್ಥಾನದಲ್ಲಿ ಕೂರಿಸಲು ಸಾಧ್ಯವಿಲ್ಲ, ಉನ್ನತ ಸ್ಥಾನದಲ್ಲಿರುವವರು ಇಂತಹ ಅರ್ಜಿಗಳನ್ನು ಮತ್ತೆ ಮತ್ತೆ ಸಲ್ಲಿಸುವುದು ಕಂಡಾಗ ನೋವಾಗುತ್ತದೆ ಎಂದು ಸಿಬಿಐ ಪರ ವಕೀಲ ಅನುಪಮ್ ಗುಪ್ತ ವಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.