ನವದೆಹಲಿ: ಕೇಂದ್ರ ಸರ್ಕಾರದ ಸೇವೆಯಲ್ಲಿರುವ ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ವಿ.ಪಿ.ಬಳಿಗಾರ್ ಅವರಿಗೆ ಕಾರ್ಯದರ್ಶಿ ಮಟ್ಟದ ಹುದ್ದೆಗೆ ಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ. ‘ಹುಡ್ಕೊ’ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಬಳಿಗಾರ್ ಸದ್ಯಕ್ಕೆ ಇದೇ ಹುದ್ದೆಯಲ್ಲಿ ಮುಂದುವರಿಯಲಿದ್ದು, ಏಪ್ರಿಲ್ ಬಳಿಕ ಬಳಿಗಾರ್ ಅವರಿಗೆ ಹೊಸ ಹುದ್ದೆ ದೊರೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.