ಆಂಧ್ರಪ್ರದೇಶ: ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ವೈಎಸ್ಆರ್ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳು ಮಂಗಳವಾರ ಆಂಧ್ರಪ್ರದೇಶ ಬಂದ್‌ಗೆ ಕರೆ ನೀಡಿವೆ.
ಹೈದರಾಬಾದ್, ವಿಜಯವಾಡ, ತಿರುಮಲ, ವಿಶಾಖಪಟ್ಟಣ ಸೇರಿದಂತೆ 13 ಜಿಲ್ಲೆಗಳಲ್ಲಿ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಶಾಲೆ–ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಆಂಧ್ರದಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ವರ್ತಕರು ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.
ಆಂಧ್ರಪ್ರದೇಶಕ್ಕೆ 10 ವರ್ಷ ವಿಶೇಷ ಸ್ಥಾನಮಾನ ನೀಡಬೇಕು ಎಂಬುವುದು ಪ್ರತಿಭಟನಾಕಾರರ ಬೇಡಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.