ADVERTISEMENT

ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ಟಿಡಿಪಿ ಸಂಸದರ ಪ್ರತಿಭಟನೆ

ಏಜೆನ್ಸೀಸ್
Published 9 ಏಪ್ರಿಲ್ 2018, 9:27 IST
Last Updated 9 ಏಪ್ರಿಲ್ 2018, 9:27 IST
ಚಿತ್ರ: ಎಎನ್‌ಐ ಟ್ವಿಟರ್‌
ಚಿತ್ರ: ಎಎನ್‌ಐ ಟ್ವಿಟರ್‌   

ನವದೆಹಲಿ: ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಷಯಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರದ ಜತೆ ಮುನಿಸಿಕೊಂಡಿರುವ ತೆಲುಗುದೇಶಂ ಪಕ್ಷ (ಟಿಡಿಪಿ) ಸಂಸದರು ಸೋಮವಾರ ರಾಜ್‌ಘಾಟ್‌ನ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು. 

2014ರ ಫೆಬ್ರುವರಿ 20ರಂದು ಅಂಗೀಕಾರಿಸಿದ ಆಂಧ್ರಪ್ರದೇಶ ಮರು ಸಂಘಟನಾ ಕಾಯ್ದೆಯನ್ನು ಕೇಂದ್ರ ಸರ್ಕಾರ ಕಾರ್ಯಗತಗೊಳಿಸುವವರೆಗೆ ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತೇವೆ ಎಂದು ರಾಜ್ಯಸಭಾ ಸದಸ್ಯ ಮತ್ತು ಕೇಂದ್ರದ ಮಾಜಿ ಸಚಿವ ವೈ.ಎಸ್‌. ಚೌದರಿ ಅವರ ತಿಳಿಸಿದರು.

‘ವಿಶೇಷ ಸ್ಥಾನಮಾನದ ಬಗ್ಗೆ ಪ್ರಧಾನಿಯೇ ನಿರ್ಧಾರ ಕೈಗೊಳ್ಳಬೇಕು. ನೀಡಿದ ಭರವಸೆಗಳನ್ನು ಪ್ರಧಾನಿ ಈಡೇರಿಸಬೇಕು. ಹಾಗಾಗಿ ಈ ಬಗ್ಗೆ ಅವರನ್ನು ಒತ್ತಾಯಿಸಲು ಬಯಸಿದ್ದೆವು’ ಎಂದು ಪ್ರತಿಭಟನಾಕಾರರು ತಿಳಿಸಿದರು.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.