ADVERTISEMENT

ವಿಶ್ವಬ್ಯಾಂಕ್‌ನಿಂದ ಸಹಾಯಧನ ಕೋರಿಕೆ: ಚಿದು

​ಪ್ರಜಾವಾಣಿ ವಾರ್ತೆ
Published 1 ಜುಲೈ 2013, 13:12 IST
Last Updated 1 ಜುಲೈ 2013, 13:12 IST

ಡೆಹ್ರಾಡೂನ್ (ಪಿಟಿಐ): ಉತ್ತರಾಖಂಡದ ಪ್ರವಾಹ ಪೀಡಿತ ಪ್ರದೇಶಗಳ ಪುನರ್‌ನಿರ್ಮಾಣಕ್ಕೆ ವಿಶ್ವ  ಬ್ಯಾಂಕ್ ಮತ್ತು ಏಷ್ಯಾ ಅಭಿವೃದ್ಧಿ ಬ್ಯಾಂಕ್(ಎಡಿಬಿ)ಗಳಿಂದ  ಆರ್ಥಿಕ ಸಹಾಯ ಕೋರಲು ಸರ್ಕಾರ ಚಿಂತಿಸಿದೆ ಎಂದು ಹಣಕಾಸು ಸಚಿವ ಪಿ ಚಿದಂಬರಂ ಸೋಮವಾರ ತಿಳಿಸಿದ್ದಾರೆ.

ಈಗಾಗಲೇ ಸರ್ಕಾರ 1000 ಕೋಟಿ ರೂಪಾಯಿ ನೆರವು ಘೋಷಿಸಿದೆ. ತಕ್ಷಣಕ್ಕೆ 145 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಪ್ರವಾಹ ಪೀಡಿತ ಸ್ಥಳಗಳ ಸಮಗ್ರ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿಗಳ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಬ್ಯಾಂಕ್ ಮತ್ತು ಎಡಿಬಿಯ ನೆರವು ಕೋರಲಾಗುವುದು ಎಂದು ಚಿದಂಬರಂ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.