ADVERTISEMENT

ವಿಷಯ, ವಿಭಾಗವಾರು ಮೀಸಲಾತಿ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2018, 19:30 IST
Last Updated 6 ಮಾರ್ಚ್ 2018, 19:30 IST

ನವದೆಹಲಿ: ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಇನ್ನು ಮುಂದೆ ಬೋಧಕರನ್ನು ನೇಮಕ ಮಾಡಿಕೊಳ್ಳುವಾಗ ವಿಷಯ ಅಥವಾ ವಿಭಾಗವಾರು ಆಧಾರದಲ್ಲಿ ಮೀಸಲಾತಿ ನೀಡಬೇಕಾಗುತ್ತದೆ.

ಈ ಸಂಬಂಧ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಪರಿಷ್ಕೃತ ನಿಯಮಗಳ ಅಧಿಸೂಚನೆ ಹೊರಡಿಸಿದೆ. ಎಲ್ಲ ಹಂತಗಳಲ್ಲೂ ವಿಷಯವಾರು ಅಥವಾ ವಿಭಾಗವಾರು ಬೋಧಕರ ನೇಮಕಕ್ಕೆ ಅನುಗುಣವಾಗಿ ಪ್ರತ್ಯೇಕವಾಗಿ ಹುದ್ದೆಗಳ ಸಂಖ್ಯೆಯನ್ನು ಲೆಕ್ಕ ಹಾಕಿ ಮೀಸಲಾತಿ ನೀಡಬೇಕು ಮತ್ತು ರೋಸ್ಟರ್ ಪದ್ಧತಿ ಅನುಸರಿಸಬೇಕು. ಇದುವರೆಗೆ, ನೇಮಕ ಮಾಡಿಕೊಳ್ಳುವ ಒಟ್ಟು ಬೋಧಕರ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನಿಗದಿ ಮಾಡಲಾಗುತ್ತಿತ್ತು.

ತಕ್ಷಣದಿಂದಲೇ ಹೊಸ ನಿಯಮಗಳನ್ನು ಅನುಸರಿಸಬೇಕು. ಒಂದು ತಿಂಗಳ ಒಳಗಾಗಿ ಹೊಸ ರೋಸ್ಟರ್ ಸಿದ್ಧಪಡಿಸಬೇಕು ಎಂದು ಕುಲಪತಿಗಳಿಗೆ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.