ADVERTISEMENT

ವೀರಭದ್ರ ಸಿಂಗ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2012, 9:38 IST
Last Updated 25 ಡಿಸೆಂಬರ್ 2012, 9:38 IST

ಸಿಮ್ಲಾ (ಪಿಟಿಐ): ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ವೀರಭದ್ರ ಸಿಂಗ್ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.

ವೀರಭದ್ರ ಸಿಂಗ್ ಅವರೊದಿಗೆ 10 ಜನ ಮಂತ್ರಿಗಳು ಕೂಡ ಪ್ರಮಾಣ ವಚನ ಸ್ವೀಕರಿಸಿದರು. ವೀರಭದ್ರ ಸಿಂಗ್ ಆರನೇ ಭಾರಿ ಮುಖ್ಯಮಂತ್ರಿಯಾಗುವ ಮೂಲಕ ನೂತನ ದಾಖಲೆ ಬರೆದರು.

ರಾಜಭವನದ ಎದುರು ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಉರ್ಮಿಳಾ ಸಿಂಗ್ ಪ್ರಮಾಣ ವಚನ ಭೋದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.