ನವದೆಹಲಿ (ಪಿಟಿಐ): ಎಂಬಿಬಿಎಸ್ ಮತ್ತು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳಿಗೆ ಈ ಶೈಕ್ಷಣಿಕ ವರ್ಷದಿಂದ ದೇಶದಾದ್ಯಂತ ಸಮಾನ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ ನಡೆಸುವಂತೆ ಸುಪ್ರೀಂಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತು.
ನ್ಯಾಯಮೂರ್ತಿಗಳಾದ ಆರ್.ವಿ. ರವೀಂದ್ರನ್ ಮತ್ತು ಎ.ಕೆ. ಪಟ್ನಾಯಿಕ್ ಅವರನ್ನು ಒಳಗೊಂಡ ಪೀಠವು ಈ ನಿಟ್ಟಿನಲ್ಲಿ ಆದೇಶ ಹೊರಡಿಸಿ ~ಇದು ರಾಷ್ಟ್ರದಲ್ಲಿನ ಖಾಸಗಿ ವೈದ್ಯಕೀಯ ಕಾಲೇಜುಗಳಿಗೂ ಅನ್ವಯಿಸುವುದು~ ಎಂದು ಹೇಳಿತು.
ಭಾರತೀಯ ವೈದ್ಯಕೀಯ ಮಂಡಳಿಯು ಎಂಬಿಬಿಎಸ್ ಮತ್ತು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳಿಗೆ ರಾಷ್ಟ್ರದಾದ್ಯಂತ ಸಮಾನ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನಡೆಸುವಂತೆ ಮಾಡಿದ್ದ ಮನವಿಯನ್ನು ಪುರಸ್ಕರಿಸಿದ ಪೀಠವು ಅದರಂತೆ ಏಕೈಕ ಸಾಮಾನ್ಯ ಪರೀಕ್ಷೆ ನಡೆಸುವಂತೆ ಸರ್ಕಾರಕ್ಕೆ ಸೂಚಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.