ADVERTISEMENT

ವ್ಯಾನ್‌ಗೆ ರೈಲು ಡಿಕ್ಕಿ: 15 ಸಾವು

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2012, 19:30 IST
Last Updated 20 ಮಾರ್ಚ್ 2012, 19:30 IST

ಲಖನೌ (ಐಎಎನ್‌ಎಸ್) : ಕಾವಲುಗಾರರಹಿತ  ರೈಲ್ವೆ ಲೆವೆಲ್ ಕ್ರಾಸಿಂಗ್‌ನಲ್ಲಿ ಪ್ಯಾಸೆಂಜರ್ ರೈಲೊಂದು ವ್ಯಾನ್‌ಗೆ ಡಿಕ್ಕಿ ಹೊಡೆದು 15 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

25 ಮಂದಿಯನ್ನು ಹೊತ್ತ ವ್ಯಾನ್ ಲೆವೆಲ್ ಕ್ರಾಸಿಂಗ್ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಹದಿನೈದು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಮಾರು ಹನ್ನೆರಡಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.