ADVERTISEMENT

ಶರದ್‌ಗೆ ಬಂಗಲೆ ಇದೆ, ಸಂಬಳ ಇಲ್ಲ: ಸುಪ್ರೀಂ ಕೋರ್ಟ್‌ ಆದೇಶ

ಪಿಟಿಐ
Published 7 ಜೂನ್ 2018, 19:30 IST
Last Updated 7 ಜೂನ್ 2018, 19:30 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಜೆಡಿಯುನ ಬಂಡಾಯ ಸಂಸದ ಶರದ್‌ ಯಾದವ್‌ ಅವರು ತಮ್ಮನ್ನು ರಾಜ್ಯಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಇತ್ಯರ್ಥ ಆಗುವ ತನಕ ವೇತನ ಮತ್ತು ಭತ್ಯೆಗಳನ್ನು ಪಡೆದುಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ.

ಶರದ್‌ ಅವರು ವೇತನ, ಭತ್ಯೆ ಪಡೆದುಕೊಳ್ಳಬಹುದು ಮತ್ತು ಸರ್ಕಾರಿ ಬಂಗಲೆಯನ್ನು ಉಳಿಸಿಕೊಳ್ಳಬಹುದು ಎಂದು ದೆಹಲಿ ಹೈಕೋರ್ಟ್‌ ಕಳೆದ ಡಿಸೆಂಬರ್‌ 15ರಂದು ಆದೇಶ ನೀಡಿತ್ತು.

ಜೆಡಿಯುನ ರಾಜ್ಯಸಭಾ ಸದಸ್ಯ ರಾಮಚಂದ್ರ ಪ್ರಸಾದ್‌ ಸಿಂಗ್‌ ಅವರು ಈ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.