ADVERTISEMENT

ಶಾಂತಿ ಕಾಯ್ದುಕೊಳ್ಳಲು ಪ್ರಧಾನಿ ಸಲಹೆ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2012, 19:30 IST
Last Updated 16 ಆಗಸ್ಟ್ 2012, 19:30 IST

ನವದೆಹಲಿ (ಪಿಟಿಐ): ಎಲ್ಲಾ ಪಕ್ಷಗಳು ಒಗ್ಗೂಡಿ ಈಶಾನ್ಯ ರಾಜ್ಯಗಳ ಜನರಲ್ಲಿ ವಿಶ್ವಾಸ ಮೂಡಿಸಬೇಕು ಮತ್ತು ಯಾವುದೇ ಸಂದರ್ಭದಲ್ಲೂ ಶಾಂತಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಗುರುವಾರ ಸೂಚಿಸಿದ್ದಾರೆ.

ಕರ್ನಾಟಕ, ಮಹಾರಾಷ್ಟ್ರ ಮತ್ತು ಅಸ್ಸಾಂ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ ಅವರು, ಜಾಗೃತೆ ವಹಿಸಬೇಕಾದ  ಮತ್ತು ಕೋಮುಸೌಹಾರ್ದತೆ ಕಾಯ್ದುಕೊಳ್ಳಬೇಕಾದ ಅಗತ್ಯದ ಬಗ್ಗೆ ಒತ್ತಿ ಹೇಳಿದ್ದಾರೆ.

ಪ್ರಧಾನಿ ನಿವಾಸದಲ್ಲಿ ಏರ್ಪಡಿಸಿದ್ದ ಇಫ್ತಾರ್ ಕೂಟದಲ್ಲಿ ಅವರು ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕದ ಮುಖ್ಯಮಂತ್ರಿ ಶೆಟ್ಟರ್ ಅವರು, ರೈಲು ನಿಲ್ದಾಣಕ್ಕೇ ಗೃಹ ಸಚಿವರನ್ನು ಕಳುಹಿಸಿ  ಈಶಾನ್ಯ ರಾಜ್ಯ ಜನರ ಆತಂಕ ದೂರ ಮಾಡುವಂಥ ಉತ್ತಮ ಕಾರ್ಯ ಮಾಡಿದ್ದಾರೆ ಎಂದಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.