ADVERTISEMENT

ಶಾಲಾ ಪಠ್ಯದಲ್ಲಿ ಆರ್‌ಟಿಐ ಸೇರ್ಪಡೆ?

​ಪ್ರಜಾವಾಣಿ ವಾರ್ತೆ
Published 8 ಜುಲೈ 2012, 19:30 IST
Last Updated 8 ಜುಲೈ 2012, 19:30 IST

ನವದೆಹಲಿ (ಪಿಟಿಐ): ಮಾಹಿತಿ ಹಕ್ಕು ಕಾಯ್ದೆಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅದರ ವಿವಿಧ ಮಜಲುಗಳ ಕುರಿತ ಪಾಠಗಳನ್ನು ಶಾಲಾ ಪಠ್ಯಕ್ರಮದಲ್ಲಿ ಅಳವಡಿಸುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ.

ಮಾಹಿತಿ ಹಕ್ಕು ಕಾಯ್ದೆಗೆ ಸಂಬಂಧಿಸಿದ ವಿಷಯಗಳ ಕುರಿತಂತೆ ನೋಡಲ್ ಏಜೆನ್ಸಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಈ ದಿಸೆಯಲ್ಲಿ ಎನ್‌ಸಿಇಆರ್‌ಟಿ ಜೊತೆ ಮಾತುಕತೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಅಲ್ಲದೆ ಈ ಕುರಿತ ಪ್ರಸ್ತಾಪ ಆರಂಭಿಕ ಹಂತದಲ್ಲಿದ್ದು ಎನ್‌ಸಿಇಆರ್‌ಟಿ ಜೊತೆ ಸಮಾಲೋಚನೆ ನಡೆಸಿದ ಬಳಿಕವಷ್ಟೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಗೆ ಬರುತ್ತಿರುವ ಅರ್ಜಿಗಳ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದೂ ನುಡಿದಿದ್ದಾರೆ.

ಮಾಹಿತಿ ಹಕ್ಕು ಕಾಯ್ದೆಯಿಂದ ಆಡಳಿತ ಮಟ್ಟದಲ್ಲಿ ಸುಧಾರಣೆ ಕಂಡುಬಂದಿದೆ. ಇಲಾಖೆಗೆ ಬರುವ ಅರ್ಜಿಗಳಿಂದ ಅಲ್ಲಿನ ಕಾರ್ಯವೈಖರಿ ಕೂಡ ಬೆಳಕಿಗೆ ಬರುತ್ತಿದ್ದು, ಇದಕ್ಕೆ ವ್ಯಾಪಕ ಪ್ರಚಾರ ದೊರೆಯಬೇಕಾಗಿರುವುದು ಅಗತ್ಯವಾಗಿದೆ. ಹಾಗಾಗಿ ಶಾಲಾ ಮಕ್ಕಳನ್ನು ನಾವು ಗುರಿಯಾಗಿಟ್ಟುಕೊಂಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.