ADVERTISEMENT

ಶಿವಸೇನಾ ನಾಯಕ ಸಚಿನ್‌ ಸಾವಂತ್‌ ಗುಂಡಿಕ್ಕಿ ಹತ್ಯೆ

ಏಜೆನ್ಸೀಸ್
Published 23 ಏಪ್ರಿಲ್ 2018, 2:58 IST
Last Updated 23 ಏಪ್ರಿಲ್ 2018, 2:58 IST
ಶಿವಸೇನಾ ನಾಯಕ ಸಚಿನ್‌ ಸಾವಂತ್‌ ಗುಂಡಿಕ್ಕಿ ಹತ್ಯೆ
ಶಿವಸೇನಾ ನಾಯಕ ಸಚಿನ್‌ ಸಾವಂತ್‌ ಗುಂಡಿಕ್ಕಿ ಹತ್ಯೆ   

ಮುಂಬೈ: ಶಿವಸೇನಾ ನಾಯಕ ಸಚಿನ್ ಸಾವಂತ್ ಅವರನ್ನು ಮುಂಬೈನ ಕಂಡಿವಲಿಯ ಗೋಕುಲ್ ನಗರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ರಾತ್ರಿ 8 ಗಂಟೆಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಸಾವಂತ್ ಕಾರನ್ನು ಅಡ್ಡಗಟ್ಟಿ ಅವರ ಮೇಲೆ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸಾವಂತ್‌ ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರು ದಾರಿ ಮಧ್ಯದಲ್ಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ ಎಂದೂ ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.