ADVERTISEMENT

ಶೀಘ್ರವೇ ಡ್ರೋನ್ ನೀತಿ ಸಿದ್ಧ

ಕಳೆದ ವರ್ಷ ಕರಡು ಸಿದ್ಧಪಡಿಸಿದ್ದ ಸಚಿವಾಲಯ

ಪಿಟಿಐ
Published 16 ಮೇ 2018, 19:30 IST
Last Updated 16 ಮೇ 2018, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ : ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ಡ್ರೋನ್ ನೀತಿಯನ್ನು ಅಂತಿಮಗೊಳಿಸಿದ್ದು, ಕೇಂದ್ರ ಸರ್ಕಾರವು ಸದ್ಯದಲ್ಲೇ ಇದನ್ನು ಪ್ರಕಟಿಸಲಿದೆ ಎಂದು ಕೇಂದ್ರ ಸಚಿವ ಜಯಂತ್ ಸಿನ್ಹಾ ಹೇಳಿದ್ದಾರೆ.

ಮಾನವರಹಿತ ವಾಯುಯಾನ ವ್ಯವಸ್ಥೆಗೆ ಸಂಬಂಧಿಸಿದ ಕರಡನ್ನು ಸಚಿವಾಲಯ ಕಳೆದ ವರ್ಷವೇ ಸಿದ್ಧಪಡಿಸಿತ್ತು. ಸಾರ್ವಜನಿಕರಿಂದ ಪ್ರತಿಕ್ರಿಯೆ ಕೇಳಿತ್ತು. ಭದ್ರತೆಗೆ ಸಂಬಂಧಿಸಿದ ವಿಚಾರಗಳು ಹಾಗೂ ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾದ ವಿಷಯಗಳನ್ನು ಸಂಬಂಧಿಸಿದವರ ಜೊತೆ ವಿಸ್ತೃತವಾಗಿ ಚರ್ಚಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಭದ್ರತೆ ಹಾಗೂ ಅಂತರರಾಷ್ಟ್ರೀಯ ಮಾನದಂಡ ಕುರಿತ ಕೆಲ ಸಂಕೀರ್ಣ ವಿಚಾರಗಳು ಇನ್ನಷ್ಟೇ ಇತ್ಯರ್ಥವಾಗಬೇಕಿವೆ. ಆದಾಗ್ಯೂ ಶೀಘ್ರದಲ್ಲಿ ಡ್ರೋನ್ ನೀತಿಯನ್ನು ಪ್ರಕಟಿಸಲಾಗುತ್ತದೆ ಎಂದು ಇಲಾಖೆಯ ಸಚಿವರು ಹೇಳಿದ್ದಾರೆ.

ADVERTISEMENT

ಸಿಐಐ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಮಾನಗಳಿಗೆ ಸಂಬಂಧಿಸಿದ ಈಗಿರುವ ನಿಯಮಗಳು ಡ್ರೋನ್‌ಗಳ ಖರೀದಿ, ಬಳಕೆಗೆ ಅನ್ವಯವಾಗುವುದಿಲ್ಲ. ಹೀಗಾಗಿ ನಾಗರಿಕ ವಿಮಾನಯಾನ ಜಾರಿ ನಿರ್ದೇಶನಾಲಯವು (ಡಿಜಿಸಿಎ) ನಾಗರಿಕರು ಡ್ರೋನ್ ಬಳಸುವುದರ ಮೇಲೆ ನಿರ್ಬಂಧ ವಿಧಿಸಿತ್ತು.
*
ಡ್ರೋನ್‌ಗಳು ವಿಶಿಷ್ಟ ಗುರುತಿನ ಸಂಖ್ಯೆ ಹೊಂದುವುದು ಕಡ್ಡಾಯ. ಐದು ರೀತಿಯಲ್ಲಿ ಡ್ರೋನ್‌ಗಳನ್ನು ವಿಭಾಗಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.