ತಿರುವನಂತಪುರ(ಪಿಟಿಐ): ದೆಹಲಿಯ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್ ಅವರು ಕೇರಳ ರಾಜ್ಯಪಾಲರಾಗಿ ಮಂಗಳವಾರ ಇಲ್ಲಿನ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಕೇರಳ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್ ಅವರು ಶೀಲಾ ದೀಕ್ಷಿತ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಹಾಗೂ ಸಂಪುಟ ಸದಸ್ಯರು ಉಪಸ್ಥಿತರಿದ್ದರು.
ಕೇರಳ ರಾಜ್ಯಪಾಲರಾಗಿದ್ದ ನಿಖಿಲ್ ಕುಮಾರ್ ಅವರು ಲೋಕಸಭಾ ಚುನಾವಣೆಗೆ ಬಿಹಾರದ ಔರಂಗಾಬಾದ್ನಿಂದ ಸ್ಪರ್ಧಿಸಲಿರುವ ಕಾರಣ ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಶೀಲಾ ದೀಕ್ಷಿತ್ ಅವರು 1998 ರಿಂದ 2013ರವರೆಗೆ ದೆಹಲಿ ಮುಖ್ಯಮಂತ್ರಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.