ADVERTISEMENT

ಶುಲ್ಕ ಪಾವತಿಸದಿದ್ದರೆ ಬೋಳು ತಲೆ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2011, 17:25 IST
Last Updated 4 ಫೆಬ್ರುವರಿ 2011, 17:25 IST

ಗಾಜಿಯಾಬಾದ್ (ಪಿಟಿಐ):  ಸಂಸ್ಥೆ ಏರಿಸಿದ್ದ ಹೆಚ್ಚುವರಿ ಶುಲ್ಕ ಪಾವತಿಸಿಲ್ಲದ 30 ವಿದ್ಯಾರ್ಥಿಗಳ ತಲೆ ಬೋಳಿಸಿದ ಆರೋಪದ ಮೇರೆಗೆ ಆಡಳಿತ ನಿರ್ವಹಣಾ ಸಂಸ್ಥೆಯ ನಿರ್ದೇಶಕರ ವಿರುದ್ಧ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಡಳಿತ ನಿರ್ವಹಣಾ ಅಧ್ಯಯನ ಸಂಸ್ಥೆ (ಐಎಂಎಸ್) ನಿರ್ದೇಶಕ ಪ್ರಮಲ್ ಚಕ್ರವರ್ತಿ ಮತ್ತು ನಾಲ್ವರು ಸಿಬ್ಬಂದಿ ವಿರುದ್ಧ ಐಪಿಸಿ ಸೆಕ್ಷನ್ 147, 504 ಮತ್ತು 506ರ ಅನ್ವಯ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳಾದ ದಿನೇಶ್ ಕುಮಾರ್, ಅಶ್ವಿನಿ ಮತ್ತು ವಿಪಿನ್‌ಕುಮಾರ್ ಅವರು ನೀಡಿದ ದೂರಿನ ಮೇರೆಗೆ 3/1 ಎಸ್‌ಸಿ/ಎಸ್‌ಟಿ ಕಾಯ್ದೆ ಪ್ರಕಾರ ಮಸೂರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.

ಶುಲ್ಕ ಭರಿಸದೇ ಇದ್ದ ಕಾರಣ ಪರೀಕ್ಷಾ ಪ್ರವೇಶ ಪತ್ರ ನೀಡಲು ನಿರಾಕರಿಸಲಾಯಿತು. ಅನಂತರ ವಿದ್ಯಾರ್ಥಿಗಳ ತಲೆ ಬೋಳಿಸಲಾಯಿತು ಎಂದು ಇನ್ಸ್‌ಪೆಕ್ಟರ್ ಸಂಜೀವ್ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.