ನವದೆಹಲಿ (ಪಿಟಿಐ): ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಶೇ 42.5ರಷ್ಟು ಮಕ್ಕಳು ಕಡಿಮೆ ತೂಕ ಹೊಂದಿದ್ದಾರೆ ಮತ್ತು ಶೇ 69.5 ರಷ್ಟು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ ಎಂದು ಸರ್ಕಾರ ಶುಕ್ರವಾರ ತಿಳಿಸಿದೆ.
2005-06ರ ಸಮೀಕ್ಷೆ ಪ್ರಕಾರ ಈ ವಿಷಯ ದೃಢಪಟ್ಟಿದೆ ಎಂದು ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಕೃಷ್ಣ ತೀರ್ಥ ಲೋಕಸಭೆಗೆ ತಿಳಿಸಿದ್ದಾರೆ.
ಯುನಿಸೆಫ್ ದಾಖಲೆ ಪ್ರಕಾರ ಉಳಿದ ದೇಶಗಳಿಗಿಂತ ಭಾರತ ಉತ್ತಮ ಸ್ಥಿತಿಯಲ್ಲಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.