ADVERTISEMENT

ಸಂಕ್ಷಿಪ್ತ ಸುದ್ದಿ - ರಾಷ್ಟ್ರೀಯ

​ಪ್ರಜಾವಾಣಿ ವಾರ್ತೆ
Published 21 ಜೂನ್ 2013, 19:59 IST
Last Updated 21 ಜೂನ್ 2013, 19:59 IST

ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ
ಚೆನ್ನೈ(ಪಿಟಿಐ): ರಾಜ್ಯಸಭಾ ಚುನಾವಣೆಯಲ್ಲಿ ಡಿಎಂಕೆ ಪಕ್ಷದ ಅಭ್ಯರ್ಥಿ ಕನಿಮೊಳಿ ಅವರನ್ನು ಬೆಂಬಲಿಸುವುದಾಗಿ ಭರವಸೆ ನೀಡಿದ್ದ ಪಟ್ಟಾಳಿ ಮಕ್ಕಳ್ ಕಚ್ಚಿ(ಪಿಎಂಕೆ) ಪಕ್ಷ ಚುನಾವಣೆಯನ್ನು ಬಹಿಷ್ಕರಿಸುವ ಬೆದರಿಕೆ ಹಾಕಿ ಆಂತಕವನ್ನುಂಟು ಮಾಡಿದೆ.

`ಪಿಎಂಕೆ ಪಕ್ಷದ ಕಾರ್ಯಕಾರಿಣಿಯಲ್ಲಿ ರಾಜ್ಯಸಭಾ ಚುನಾವಣೆಯನ್ನು ಬಹಿಷ್ಕರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ' ಎಂದು ಪಿಎಂಕೆ ಪ್ರಕಟಣೆಯಲ್ಲಿ ತಿಳಿಸಿದೆ.

ಮೇವು ಹಗರಣ: ಜು. 15ಕ್ಕೆ ತೀರ್ಪು
ರಾಂಚಿ (ಐಎಎನ್‌ಎಸ್): ಬಿಹಾರದ ಮೇವು ಹಗರಣಕ್ಕೆ ಸಂಬಂಧಿಸಿದ ತೀರ್ಪು ಜುಲೈ 15ರಂದು ಪ್ರಕಟವಾಗಲಿದೆ. ಇದರಲ್ಲಿ ಪ್ರಮುಖ ಆರೋಪಿಗಳಾಗಿರುವ ಮಾಜಿ ಮುಖ್ಯ ಮಂತ್ರಿಗಳಾದ ಲಾಲೂ  ಪ್ರಸಾದ್ ಮತ್ತು ಜಗನ್ನಾಥ್ ಮಿಶ್ರಾ ಅವರ ಹಣೆಬರಹ ಆ ದಿನ ನಿರ್ಧಾರವಾಗಲಿದೆ.

ಮೊಯಿಲಿ ರಾಜೀನಾಮೆಗೆ ಸಿಪಿಐ ಆಗ್ರಹ
ನವದೆಹಲಿ (ಪಿಟಿಐ): ದೇಶದ ಹಿತಾಸಕ್ತಿಯನ್ನು ಬಲಿ ಕೊಟ್ಟು  ಕಾರ್ಪೊರೇಟ್ ವಲಯಕ್ಕೆ ಲಾಭ ಮಾಡಿಕೊಡುವ ಉದ್ದೇಶದಿಂದ ನೈಸರ್ಗಿಕ ಅನಿಲದ ಬೆಲೆ ಹೆಚ್ಚಿಸುವ ಪ್ರಸ್ತಾಪ ಮಾಡಲಾಗಿದೆ. ಆದ್ದರಿಂದ ಪೆಟ್ರೋಲಿಯಂ ಖಾತೆಯ ಸಚಿವ ವೀರಪ್ಪ ಮೊಯಿಲಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿಪಿಐ ಆಗ್ರಪಡಿಸಿದೆ.

ಇದೊಂದು ಗಂಭೀರ ವಿಚಾರವಾಗಿರುವುದರಿಂದ ಸುಪ್ರೀಂಕೋರ್ಟ್ ನ್ಯಾಯ ಮೂರ್ತಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಬೇಕು ಎಂದು ಸಿಪಿಐ ಒತ್ತಾಯಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.