
ಪ್ರಜಾವಾಣಿ ವಾರ್ತೆಪುಣೆ (ಐಎಎನ್ಎಸ್):ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿ ಮಾನ್ಯತಾ ಅವರನ್ನು ನೋಡಿಕೊಳ್ಳುವ ಸಲುವಾಗಿ ಬಾಲಿವುಡ್ ನಟ ಸಂಜಯ್ ದತ್ ಅವರಿಗೆ ಶನಿವಾರ ಮತ್ತೆ ಒಂದು ತಿಂಗಳ ಪೆರೋಲ್ ಮಂಜೂರು ಮಾಡಲಾಗಿದೆ.
ಮುಂಬೈ ಸ್ಫೋಟ ಪ್ರಕರಣ ಸಂದರ್ಭದಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದ ಮೇಲೆ ಜೈಲು ಸೇರಿದ್ದ ದತ್ ಅವರು ಮೂರು ತಿಂಗಳಲ್ಲಿ ಇದು ಎರಡನೇ ಬಾರಿಗೆ ಪೆರೋಲ್ ಪಡೆದಂತಾಗಿದೆ. ಯರವಾಡಾ ಜೈಲಿನಿಂದ ದತ್ ಅವರು ಮುಂಬೈನ ತಮ್ಮ ನಿವಾಸಕ್ಕೆ ತೆರಳಿದ್ದಾರೆ.
ಈ ಮೊದಲು ಅನಾರೋಗ್ಯದ ಕಾರಣಕ್ಕೆ ಪೆರೋಲ್ ನೀಡಿದ್ದು ತೀವ್ರ ವಿವಾದಕ್ಕೆ ಎಡೆಮಾಡಿತ್ತು. ರಾಜಕೀಯ ಪಕ್ಷಗಳ ವಿರೋಧದ ನಡುವೆಯೇ ಇದೀಗ ಮತ್ತೆ ಪೆರೋಲ್ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.