ಮುಂಬೈ(ಪಿಟಿಐ): ವಾಣಿಜ್ಯ ನಗರಿ ಮುಂಬೈನಲ್ಲಿ 1993ರಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಅಪರಾಧಕ್ಕಾಗಿ ಐದು ವರ್ಷ ಜೈಲುಶಿಕ್ಷೆಗೊಳಗಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಒಂದು ತಿಂಗಳ ಪೆರೋಲ್ ಮೇಲೆ ಪುಣೆಯ ಯೆರವಡಾ ಜೈಲಿನಿಂದ ಶನಿವಾರ ಬಿಡುಗಡೆಯಾದರು.
ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಕಾರಾಗೃಹ) ಮೀರನ್ ಬೋರ್ವಾಂಕರ್ ಈ ವಿಷಯವನ್ನು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಪತ್ನಿ ಮಾನ್ಯತಾ ಅನಾರೋಗ್ಯದ ಕಾರಣ ನೀಡಿ ಪೆರೋಲ್ ನೀಡಬೇಕು ಎಂದು ಪುಣೆ ವಿಭಾಗೀಯ ಆಯುಕ್ತ ಪ್ರಭಾಕರ್ ದೇಶ್ಮುಖ್ ಅವರಿಗೆ ಸಂಜಯ್ ಮನವಿ ಮಾಡಿಕೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.