ADVERTISEMENT

ಸಂಜೋತಾ ಎಕ್ಸ್‌ಪ್ರೆಸ್ ಸ್ಫೋಟ ಇನ್ನೊಬ್ಬ ಆರೋಪಿ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2012, 19:50 IST
Last Updated 12 ಫೆಬ್ರುವರಿ 2012, 19:50 IST

ನವದೆಹಲಿ (ಪಿಟಿಐ): ಸಂಜೋತಾ ಎಕ್ಸ್‌ಪ್ರೆಸ್ ರೈಲು ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಇನ್ನೊಬ್ಬ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದೆ.

ಇಂದೋರ್ ಮೂಲದ ಕಮಲ್ ಚೌಹಾಣ್ ಈಗ ಎನ್‌ಐಎ ವಶದಲ್ಲಿದ್ದಾನೆ. 2007ರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ರಾಮ್‌ಜಿ ಕಲ್‌ಸಾಗರ ಮತ್ತು ಸಂದೀಪ್ ಸಂಗೆ ಜತೆಗೆ ಈತ ನಿಕಟ ಸಂಪರ್ಕ ಹೊಂದಿದ್ದ ಎನ್ನಲಾಗಿದೆ.

ಎನ್‌ಐಎ ಮುಂದೆ ತನಿಖೆಗೆ ಹಾಜರಾಗುವಂತೆ ಆತನಿಗೆ ಸೂಚನೆ ನೀಡಲಾಗಿತ್ತು. ಆದರೆ ಆತ ಹಾಜರಾಗಿರಲಿಲ್ಲ. ಹಾಗಾಗಿ ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತನಿಖಾ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ತೀವ್ರ ವಿಚಾರಣೆ ನಡೆಸಿರುವ ತನಿಖಾ ದಳದ ಅಧಿಕಾರಿಗಳು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.