ADVERTISEMENT

ಸಂಪೂರ್ಣ ಸ್ವಾತಂತ್ರ್ಯಕ್ಕೆ ಅವಕಾಶ ಇಲ್ಲ: ಸುಪ್ರೀಂಕೋರ್ಟ್

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2013, 19:59 IST
Last Updated 4 ಆಗಸ್ಟ್ 2013, 19:59 IST

ನವದೆಹಲಿ: ದೇಶದ ಕಾನೂನಿನಲ್ಲಿ ವ್ಯಕ್ತಿಗತ ಸ್ವಾತಂತ್ರ್ಯಕ್ಕೆ ಅವಕಾಶವಿದೆಯೇ ಹೊರತು `ಸಂಪೂರ್ಣವಾದ ಸ್ವಾತಂತ್ರ್ಯ'ಕ್ಕಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. 

ವೈಯಕ್ತಿಕ ಸ್ವಾತಂತ್ರ್ಯವನ್ನು ಸಂಪೂರ್ಣ ಸೇಚ್ಛಾಚಾರ ಎಂದು ತಪ್ಪಾಗಿ ಭಾವಿಸಬಾರದು. ಕಾನೂನಿನಲ್ಲಿ ಒಂದು ಹಂತದವರೆಗೆ ವ್ಯಕ್ತಿಗತ ಸ್ವಾತಂತ್ರ್ಯಕ್ಕೆ ಅವಕಾಶವಿದೆಯೇ ಹೊರತು ಸ್ವೇಚ್ಛಾಚಾರಕ್ಕೆ ಅಲ್ಲ ಎಂದು ನ್ಯಾಯಮೂರ್ತಿಗಳಾದ ಎಚ್.ಎಲ್. ಗೋಖಲೆ ಮತ್ತು ದೀಪಕ್ ಮಿಶ್ರಾ ಅವರಿದ್ದ ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

ಉತ್ತರ ಪ್ರದೇಶದ ಸಮಾಜ ವಿರೋಧಿ ಚಟುವಟಿಕೆ ನಿಯಂತ್ರಣ ಕಾಯ್ದೆ 1986ರ ಸೆಕ್ಷನ್ 12 ಅನ್ನು ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿಹಾಕಿದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.