ADVERTISEMENT

ಸಂರಕ್ಷಿತ ಸ್ಮಾರಕ ಬಳಿ ನಿರ್ಮಾಣ ಸಲ್ಲ

​ಪ್ರಜಾವಾಣಿ ವಾರ್ತೆ
Published 19 ಜನವರಿ 2012, 19:30 IST
Last Updated 19 ಜನವರಿ 2012, 19:30 IST

ನವದೆಹಲಿ (ಪಿಟಿಐ):  ಪ್ರಾಚೀನ ಸ್ಮಾರಕ ಮತ್ತು ಪುರಾತತ್ವ ಕಾಯಿದೆ ಅಡಿಯಲ್ಲಿ ಸಂರಕ್ಷಿಸಲ್ಪಟ್ಟಿರುವ ರಾಜಧಾನಿಯ ಜಂತರ್ ಮಂತರ್ ಸೇರಿದಂತೆ ಯಾವುದೇ ಸ್ಮಾರಕಗಳ ನೂರು ಮೀಟರ್ ಒಳಗೆ ನಿರ್ಮಾಣ ಕಾರ್ಯ ನಡೆಸುವಂತಿಲ್ಲ ಎಂದು ಸುಪ್ರೀಂ    ಕೋರ್ಟ್ ಆದೇಶ ಮಾಡಿದೆ.

ಪುರಾತತ್ವ ಕಾಯಿದೆಯನ್ನು ಅನುಷ್ಠಾನಗೊಳಿಸಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳದೇ ಹೋದರೆ ಐತಿಹಾಸಿಕವಾದ ಜಂತರ್ ಮಂತರ್‌ನಂತಹ ಸ್ಮಾರಕಗಳು ಇತಿಹಾಸದ ಗರ್ಭ ಸೇರುತ್ತವೆ ಎಂದು ನ್ಯಾಯಮೂರ್ತಿಗಳಾದ ಜಿ.ಎಸ್.ಸಿಂಘ್ವಿ ಮತ್ತು ಎ.ಕೆ.ಗಂಗೂಲಿ ಅವರನ್ನು ಒಳಗೊಂಡ ನ್ಯಾಯಪೀಠ ಆತಂಕ ವ್ಯಕ್ತಪಡಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.