ನವದೆಹಲಿ (ಪಿಟಿಐ): ಜರ್ಮನ್ ಬದಲು ಸಂಸ್ಕೃತವನ್ನು ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡಿರುವ ಆರು, ಏಳು ಹಾಗೂ ಎಂಟನೇ ತರಗತಿಯ ವಿದ್ಯಾರ್ಥಿಗಳು ಪ್ರಸಕ್ತ ಶೈಕ್ಷಣಿಕ ಸಾಲಿನ ತೃತೀಯ ಭಾಷಾ ಪರೀಕ್ಷೆ ಬರೆಯಬೇಕಿಲ್ಲ ಎಂದು ಕೇಂದ್ರೀಯ ವಿದ್ಯಾಲಯ ಮಂಗಳವಾರ ಸಲ್ಲಿಸಿದ ಪ್ರಮಾಣ ಪತ್ರಕ್ಕೆ ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದೆ.
ಜರ್ಮನ್ ಭಾಷೆಯನ್ನೇ ತೃತೀಯ ಭಾಷೆಯನ್ನಾಗಿ ಮುಂದುವರಿಸಲು ಇಚ್ಛಿಸಿದ ಹಾಗೂ ಇನ್ನಿತರ ಭಾಷೆಗಳನ್ನು ಅಭ್ಯಸಿಸುತ್ತಿರುವ ವಿದ್ಯಾರ್ಥಿಗಳಿಗೆ ಯಾವ ಸೌಲಭ್ಯ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ತಾಕೀತು ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.