ADVERTISEMENT

ಸತ್ಯಂ ಪ್ರಕರಣ: ಸಮಯ ಕೋರಿ ಸಿಬಿಐ ಮನವಿ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2011, 19:30 IST
Last Updated 18 ಸೆಪ್ಟೆಂಬರ್ 2011, 19:30 IST

ನವದೆಹಲಿ, (ಪಿಟಿಐ): ಬಹುಕೋಟಿ ಸತ್ಯಂ ಹಗರಣದ ಆಪಾದಿತರಾದ ಬಿ. ರಾಮಲಿಂಗ ರಾಜು ಮತ್ತು ಇತರ 9 ಮಂದಿಯ ವಿರ‌್ಧುದ ವಿಚಾರಣಾ ಪ್ರಕ್ರಿಯೆಯನ್ನು ಪೂರ್ತಿಗೊಳಿಸಲು ಇನ್ನೂ ಕಾಲಾವಕಾಶ ಬೇಕು ಎಂದು ಸಿಬಿಐ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದೆ.

ಈ ಕುರಿತು ಮಧ್ಯಂತರ ಅರ್ಜಿ ಸಲ್ಲಿಸಿರುವ ಸಿಬಿಐ, ಅಕ್ಟೋಬರ್ ಅಂತ್ಯದವರೆಗೆ ಕಾಲಾವಕಾಶ ನೀಡಬೇಕು ಎಂದು ಕೋರಿದೆ. ರಾಮಲಿಂಗ ರಾಜು ಅವರ ಜಾಮೀನನ್ನು ರದ್ದುಪಡಿಸಿದ ನಂತರ ವಿಚಾರಣಾ ಪ್ರಕ್ರಿಯೆಯನ್ನು ಜುಲೈ ಅಂತ್ಯದ ವೇಳೆಗೆ ಮುಕ್ತಾಯಗೊಳಿಸಬೇಕು ಎಂದು ಸೂಚಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.