ನವದೆಹಲಿ (ಪಿಟಿಐ): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 68ನೇ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಹಾಗೂ ಪ್ರಧಾನಿ ಮನಮೋಹನ್ ಸಿಂಗ್ ಅವರು ಸೋಮವಾರ ವೀರ್‌ಭೂಮಿಯಲ್ಲಿ ರಾಜೀವ್ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪುತ್ರಿ ಪ್ರಿಯಾಂಕ, ಅವರ ಪತಿ ರಾಬರ್ಟ್ ವಾದ್ರಾ, ರಕ್ಷಣಾ ಸಚಿವ ಎ.ಕೆ. ಆಂಟನಿ, ಲೋಕಸಭೆ ಅಧ್ಯಕ್ಷೆ ಮೀರಾ ಕುಮಾರ್, ಯೋಜನಾ ಆಯೋಗದ ಉಪಾಧ್ಯಕ್ಷ ಮಾಂಟೆಕ್ ಸಿಂಗ್ ಅಹ್ಲುವಾಲಿಯಾ ಅವರೂ ನಮನ ಸಲ್ಲಿಸಿದರು.
ರಾಹುಲ್ ಅನುಪಸ್ಥಿತಿ ಎದ್ದುಕಾಣುತ್ತಿತ್ತು.ಶ್ವೇತವಸ್ತ್ರ ಧರಿಸಿದ ಶಾಲಾ ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಹಿಡಿದು ವೀರ್‌ಭೂಮಿಗೆ ತೆರಳಿ ಕೋಮು ಸೌಹಾರ್ದ ಬಿಂಬಿಸುವ ಕಾರ್ಯಕ್ರಮ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.