
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ರಾಜೀವ್ ಹತ್ಯೆ ಪ್ರಕರಣದ ಏಳು ಆರೋಪಿಗಳನ್ನು ಬಿಡುಗಡೆ ಮಾಡಬಾರದು ಎಂದು ತಮಿಳುನಾಡು ಸರ್ಕಾರಕ್ಕೆ ಕೇಂದ್ರ ಸೂಚನೆ ನೀಡಿದೆ.
ಟಾಡಾ, ಶಸ್ತ್ರಾಸ್ತ್ರ ಕಾಯ್ದೆಗಳಂತಹ ಕೇಂದ್ರ ಕಾನೂನುಗಳ ಅಡಿಯಲ್ಲಿ ಹಂತಕರ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಲಾಗಿದೆ. ಹಾಗಾಗಿ ಅವರ ಬಿಡುಗಡೆಯಂತಹ ನಿರ್ಧಾರದಲ್ಲಿ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ಅಗತ್ಯ ಎಂದು ಗೃಹ ಸಚಿವಾಲಯ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.