ADVERTISEMENT

ಸಲ್ಮಾನ್ ಅಂಗರಕ್ಷಕನ ಹೆಸರಲ್ಲಿ ಬೆದರಿಕೆ

ಪಿಟಿಐ
Published 21 ಅಕ್ಟೋಬರ್ 2017, 19:30 IST
Last Updated 21 ಅಕ್ಟೋಬರ್ 2017, 19:30 IST

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅಂಗರಕ್ಷಕ ಎಂದು ಹೇಳಿಕೊಂಡು ಕರೆ ಮಾಡಿದ ವ್ಯಕ್ತಿಯೊಬ್ಬ ಸಾಮೂಹಿಕ ಅತ್ಯಾಚಾರ ಎಸಗುವುದಾಗಿ ಮಹಿಳೆಯೊಬ್ಬರಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ.

ಮಹಿಳೆ ನೀಡಿದ ದೂರಿನನ್ವಯ ಖಾರ್ ಠಾಣೆ ಪೊಲೀಸರು ಕಲಂ 509ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೊಬೈಲ್ ಸಂಖ್ಯೆ ಆಧರಿಸಿ ಆರೋಪಿಯ ಪತ್ತೆಗೆ ಹುಡುಕಾಟ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಕರೆ ಮಾಡಿದ ವ್ಯಕ್ತಿ ಅವಾಚ್ಯವಾಗಿ ನಿಂದಿಸಿ, ಅತ್ಯಾಚಾರದ ಬೆದರಿಕೆಯೊಡ್ಡಿದ ಎಂದು ಮಹಿಳೆ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT