ADVERTISEMENT

ಸಲ್ಮಾನ್ ರಶ್ದಿ ತಿರುಗೇಟು

​ಪ್ರಜಾವಾಣಿ ವಾರ್ತೆ
Published 10 ಜನವರಿ 2012, 19:30 IST
Last Updated 10 ಜನವರಿ 2012, 19:30 IST

ನವದೆಹಲಿ (ಪಿಟಿಐ): `ಭಾರತಕ್ಕೆ ಭೇಟಿ ನೀಡಲು ನನಗೆ ವೀಸಾದ ಅವಶ್ಯಕತೆ ಇಲ್ಲ~ ಎಂದು ಹೇಳುವ ಮೂಲಕ ವಿವಾದಾತ್ಮಕ ಲೇಖಕ ಸಲ್ಮಾನ್ ರಶ್ದಿ ಅವರು ತಮ್ಮ ಭಾರತ ಭೇಟಿಗೆ ವಿರೋಧ ವ್ಯಕ್ತಪಡಿಸಿರುವ ಇಸ್ಲಾಂನ ಪ್ರಮುಖ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ದಿಯೊಬಂದ್‌ಗೆ ತಿರುಗೇಟು ನೀಡಿದ್ದಾರೆ.

ಸಲ್ಮಾನ್ ರಶ್ದಿ ಅವರು ಈ ಹಿಂದೆ ಮುಸ್ಲಿಮರ ಭಾವನೆಗಳಿಗೆ ನೋವುಂಟು ಮಾಡಿರುವುದರಿಂದ ಕೇಂದ್ರ ಸರ್ಕಾರ ಅವರ ವೀಸಾವನ್ನು ರದ್ದುಪಡಿಸಬೇಕು ಎಂದು ದಿಯೊಬಂದ್ ಸೋಮವಾರ ಹೇಳಿತ್ತು.

ಅದಕ್ಕೆ ಪ್ರತಿಕ್ರಿಯಿಸಿರುವ ರಶ್ದಿ ಭಾರತಕ್ಕೆ ಭೇಟಿ ನೀಡುವುದಕ್ಕೆ ತಮಗೆ ವೀಸಾದ ಅಗತ್ಯವಿಲ್ಲ ಎಂದು ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಇಂಗ್ಲೆಂಡ್‌ನಲ್ಲಿ ನೆಲೆಸಿರುವ ಭಾರತೀಯ ಮೂಲದ ಸಲ್ಮಾನ್ ರಶ್ದಿ ಈ ತಿಂಗಳ ಅಂತ್ಯದಲ್ಲಿ ಜೈಪುರದಲ್ಲಿ ನಡೆಯಲಿರುವ  ಸಾಹಿತ್ಯ ಉತ್ಸವದಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.