ADVERTISEMENT

ಸಶಸ್ತ್ರ ಪಡೆ ವೇತನ ಪರಾಮರ್ಶೆಗೆ ಸಮಿತಿ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2012, 19:30 IST
Last Updated 22 ಆಗಸ್ಟ್ 2012, 19:30 IST

ನವದೆಹಲಿ (ಪಿಟಿಐ): ಸಶಸ್ತ್ರ ಪಡೆ ಸಿಬ್ಬಂದಿಗಳ ವೇತನ ಹಾಗೂ ನಿವೃತ್ತ ಸಿಬ್ಬಂದಿಗಳ ನಿವೃತ್ತಿ ವೇತನಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಲು ಸಂಪುಟ ಕಾರ್ಯದರ್ಶಿಯವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ರಕ್ಷಣಾ ಸಚಿವ ಎ. ಕೆ. ಆಂಟನಿ ತಿಳಿಸಿದ್ದಾರೆ.

ಆರನೇ ವೇತನ ಆಯೋಗದಲ್ಲಿನ ನ್ಯೂನತೆಗಳನ್ನು ಸರಿಪಡಿಸಲಾಗುವುದು ಎಂದು ಲಿಖಿತ ಉತ್ತರದಲ್ಲಿ ರಾಜ್ಯಸಭೆಗೆ ತಿಳಿಸಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.