ADVERTISEMENT

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆರೋಪಿಗಳ ಫೋಟೊಗಳು, ವ್ಯಾಪಕ ಖಂಡನೆ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2018, 9:06 IST
Last Updated 19 ಏಪ್ರಿಲ್ 2018, 9:06 IST
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆರೋಪಿಗಳ ಫೋಟೊಗಳು, ವ್ಯಾಪಕ ಖಂಡನೆ
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆರೋಪಿಗಳ ಫೋಟೊಗಳು, ವ್ಯಾಪಕ ಖಂಡನೆ   

ನವದೆಹಲಿ: ಕಠುವಾದ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಗಳ ಭಾವಚಿತ್ರಗಳನ್ನು ಹಾಕಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಾದ ಟ್ವಿಟ್ಟರ್, ಪೇಸ್‌ಬುಕ್‌, ಇನ್‌ಸ್ಟಾಗ್ರಾಂನಲ್ಲಿ #JusticeForAsifa ಎಂಬ ಹ್ಯಾಶ್‌ಟ್ಯಾಗ್‌ ಹಾಕಿ ಪೋಟೊಗಳನ್ನು ಪ್ರಕಟಿಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಆರೋಪಿಗಳ ಫೋಟೊಗಳನ್ನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವರು ಸೇರಿದಂತೆ ಪೊಲೀಸ್‌ ಅಧಿಕಾರಿಗಳಿಗೆ ಟ್ಯಾಗ್‌ ಮಾಡಿದ್ದಾರೆ.

ADVERTISEMENT

ಕೀರ್ತಿ ಎಂಬುವರು ಆರೋಪಿಗಳ ಹೆಸರು ಮತ್ತು ವಯಸನ್ನು ಬರೆದು ಈ ಪೋಸ್ಟ್‌ ಅನ್ನು ಸಾಧ್ಯವಾದಷ್ಟು ಶೇರ್‌ ಮಾಡಿ ಎಂದು ಮನವಿ ಮಾಡಿದ್ದಾರೆ.

ಬಾಲಿವುಡ್‌ ನಟ ನವಾಜುದ್ದೀನ್‌ ಸಿದ್ದಿಕಿ ಇದು ಧರ್ಮ, ರಾಜಕೀಯ, ಜಾತಿ, ಬಣ್ಣದ ಪ್ರಶ್ನೆಯಲ್ಲ, ಇದು ಮಾನವೀಯತೆ ಪ್ರಶ್ನೆ ಎಂದು ಟ್ವೀಟ್‌ ಮಾಡಿದ್ದಾರೆ.

ಇಂಡಿಯಾ ಫಸ್ಟ್‌ ಆಂಡ್‌ ಲಾಸ್ಟ್‌ ಎಂಬ ಖಾತೆದಾರರ ವಾಲ್‌ನಲ್ಲಿ ಪಾಕಿಸ್ತಾನದಲ್ಲಿ ಅತ್ಯಾಚಾರ ಮಾಡಿದರೆ ಗಲ್ಲಿಗೆ ಹಾಕಲಾಗುತ್ತದೆ. ಆದರೆ ಭಾರತದಲ್ಲಿ ಅತ್ಯಾಚಾರಿಗಳ ಪರವಾಗಿ ಪ್ರತಿಭಟನೆಗಳು ನಡೆಯುತ್ತವೆ ಎಂಬ ಪೋಸ್ಟ್‌ ಅನ್ನು ಪ್ರಕಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.