ADVERTISEMENT

ಸಾಯಿಬಾಬಾ ಆರೋಗ್ಯ ಗಂಭೀರ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2011, 19:00 IST
Last Updated 18 ಏಪ್ರಿಲ್ 2011, 19:00 IST
ಸಾಯಿಬಾಬಾ ಆರೋಗ್ಯ ಗಂಭೀರ
ಸಾಯಿಬಾಬಾ ಆರೋಗ್ಯ ಗಂಭೀರ   

ಪುಟ್ಟಪರ್ತಿ (ಐಎಎನ್‌ಎಸ್): ಅಸ್ವಸ್ಥ ರಾಗಿ ಆಸ್ಪತ್ರೆಗೆ ದಾಖಲಾಗಿರುವ ಸತ್ಯ ಸಾಯಿ ಬಾಬಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ ಸ್ಥಿರವಾಗಿಯೇ ಇದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.

ಸಾಯಿ ಬಾಬಾ ಅವರ ಎಲ್ಲಾ ಅಂಗಗಳು ಸಮರ್ಪಕವಾಗಿಯೇ ಕಾರ್ಯ ನಿರ್ವಹಿಸುತ್ತಿದೆಯಾದರೂ ಯಕೃತ್‌ನ ಕಾರ್ಯನಿರ್ವಹಣೆ ಸಹಜ ಸ್ಥಿತಿಗೆ ಬಂದಿಲ್ಲ. ಸಾಯಿಬಾಬಾ ಅವರ ದೇಹಸ್ಥಿತಿ ಇನ್ನೂ ಗಂಭೀರವಾಗಿಯೇ ಇದ್ದು, ವೈದ್ಯರು ಅವರ ಆರೋಗ್ಯದ ಮೇಲೆ ಸಂಪೂರ್ಣ ನಿಗಾ ವಹಿಸಿದ್ದಾರೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.