
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ಬಹುಕಾಲದ ನಂತರ ಪ್ರಧಾನಿ ಮನಮೋಹನ್ ಸಿಂಗ್ ತಮ್ಮ ನಿವಾಸದಲ್ಲಿ ಶನಿವಾರ ‘ಜನತಾ ದರ್ಶನ’ ನಡೆಸಿದರು.
ಸಮಾಜದ ವಿವಿಧ ವಲಯಗಳ ಜನರನ್ನು ಭೇಟಿ ಮಾಡಿದ ಪ್ರಧಾನಿ, ಅವರ ಕುಂದುಕೊರತೆಗಳು ಮತ್ತು ದೂರುಗಳನ್ನು ಆಲಿಸಿದರು.
ಒಂದು ಗಂಟೆಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರ ಸಮೂಹದ 31 ತಂಡಗಳು, ಸ್ವಯಂ ಸೇವಾ ಸಂಸ್ಥೆಗಳು, ಕಲಾವಿದರು, ಕ್ರೀಡಾ ಪಟುಗಳನ್ನು ಅವರು ಭೇಟಿಯಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.