ನವದೆಹಲಿ (ಪಿಟಿಐ): ಸೇನಾ ಸಾಮಗ್ರಿ ಖರೀದಿಯಲ್ಲಿ 14 ಕೋಟಿ ರೂಪಾಯಿ ಲಂಚ ಪಡೆದಿರುವುದಾಗಿ ತಮ್ಮ ವಿರುದ್ಧ ಆರೋಪ ಮಾಡಿದ್ದ ಭೂಸೇನಾ ಮುಖ್ಯಸ್ಥ ಜನರಲ್ ವಿ.ಕೆ.ಸಿಂಗ್ ಮತ್ತು ಇತರ ನಾಲ್ವರು ಸೇನಾಧಿಕಾರಿಗಳ ವಿರುದ್ಧ ನಿವೃತ್ತ ಲೆಫ್ಟಿನೆಂಟ್ ಜನರಲ್ ತೇಜಿಂದರ್ ಸಿಂಗ್ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ತೀರ್ಪನ್ನು ದೆಹಲಿ ನ್ಯಾಯಾಲಯ ಇದೇ 26ಕ್ಕೆ ಕಾಯ್ದಿರಿಸಿದೆ.
ತೇಜಿಂದರ್ ಅವರ ಕ್ರಿಮಿನಲ್ ಮೊಕದ್ದಮೆ ವಿಚಾರಣೆ ನಡೆಸಿದ ಮೆಟ್ರೊಪಾಲಿಟನ್ ನ್ಯಾಯಾಧೀಶರು, ವಿ.ಕೆ.ಸಿಂಗ್ ಹಾಗೂ ಇತರರಿಗೆ ಸಮನ್ಸ್ ನೀಡುವ ಬಗ್ಗೆ ಅದೇ ದಿನ ಆದೇಶ ನೀಡುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.