ADVERTISEMENT

ಸಿಇಟಿ: 27ಕ್ಕೆ ಐಐಟಿ ಸಭೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2012, 19:30 IST
Last Updated 22 ಜೂನ್ 2012, 19:30 IST

ನವದೆಹಲಿ (ಐಎಎನ್‌ಎಸ್): ಸಾಮಾನ್ಯ ಪ್ರವೇಶ ಪರೀಕ್ಷೆಗೆ ಸಂಬಂಧಿಸಿ ಚರ್ಚಿಸಲು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಇದೇ 27ರಂದು ದೆಹಲಿಯಲ್ಲಿ ಐಐಟಿ ಮಂಡಳಿಗಳ ಸಭೆ ಕರೆದಿದೆ.

ಐಐಟಿ ಜಂಟಿ ಪ್ರವೇಶ ಪರೀಕ್ಷೆಯನ್ನು (ಐಐಟಿ ಜೆಇಇ) ಅಖಿಲ ಭಾರತ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ (ಎಐಇಇಇ) ಜತೆ ಸೇರಿಸುವ ಪ್ರಸ್ತಾವಕ್ಕೆ ಹಲವು ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಂದ ವಿರೋಧ ವ್ಯಕ್ತವಾಗಿದೆ.
ದೆಹಲಿ ಐಐಟಿಯು ಸಾಮಾನ್ಯ ಪ್ರವೇಶ ಪರೀಕ್ಷೆ ಪ್ರಸ್ತಾವವನ್ನು ತಿರಸ್ಕರಿಸಿದ್ದು, 2013ರಿಂದ ತನ್ನದೇ ಪ್ರವೇಶ ಪರೀಕ್ಷೆ ನಡೆಸಲು ನಿರ್ಧರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.