ADVERTISEMENT

ಸಿ.ಎಂ ಬದಲಾವಣೆ ಇಲ್ಲ: ಹೂಡಾ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 22 ಜೂನ್ 2014, 19:30 IST
Last Updated 22 ಜೂನ್ 2014, 19:30 IST

ಫರೀದಾಬಾದ್‌ (ಪಿಟಿಐ): ಮುಖ್ಯಮಂತ್ರಿ ಸ್ಥಾನದಿಂದ ತಮ್ಮನ್ನು  ಬದಲಾಯಿಸುವ ಪ್ರಸ್ತಾಪ ಕಾಂಗ್ರೆಸ್‌ ಪಕ್ಷದಲ್ಲಿ ಇಲ್ಲ ಎಂದು ಹರಿಯಾಣ ಮುಖ್ಯಮಂತ್ರಿ ಭೂಪೀಂದರ್‌ ಸಿಂಗ್‌ ಹೂಡಾ ಹೇಳಿದ್ದಾರೆ. ಸೋನಿಯಾ ಗಾಂಧಿ ಅವರ ಆಶೀರ್ವಾದ ತಮ್ಮ ಮೇಲೆ ಇರುವವರೆಗೆ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿಯೂ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹರಿಯಾಣದ ಉಸ್ತುವಾರಿ ಹೊಂದಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶಕೀಲ್‌ ಅಹ್ಮದ್‌ ಅವರು ಕೂಡ ಶನಿವಾರ ಪ್ರತಿಕ್ರಿಯೆ ನೀಡಿ ಹೂಡಾ ಅವರ ಬದಲಾವಣೆ ಇಲ್ಲ ಎಂದಿದ್ದರು. ಹರಿಯಾಣ ಕಾಂಗ್ರೆಸ್‌ ನಾಯಕರಾದ ಬೀರೇಂದರ್‌ ಸಿಂಗ್‌ ಮತ್ತು ಕುಮಾರಿ ಶೆಲ್ಜಾ ಅವರು ತಮ್ಮ ಕಾರ್ಯವೈಖರಿಯನ್ನು ಟೀಕಿಸುತ್ತಿರುವುದು ದೊಡ್ಡ ವಿಷಯವಲ್ಲ ಎಂದು ಹೂಡಾ ಹೇಳಿದ್ದಾರೆ. ಭಿನ್ನಾಭಿಪ್ರಾಯಗಳು ಇರುವುದು ಸಹಜ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.